ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್ ಗೆ ಹಿಂದೂಪರ ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ.
‘ಆದಿಪುರುಷ’ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಸಾಕಷ್ಟು ಅಂಶಗಳು ಇವೆ. ಹಾಗಾಗಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್ ಗೆ ಸಂಘಟನೆಗಳು ಮನವಿ ಮಾಡಿಕೊಂಡಿವೆ.
ಆದಿಪುರುಷ ಸಿನಿಮಾದಲ್ಲಿ ರಾಮಾಯಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದಾರೆ. ಅದು ಹಿಂದೂಗಳಿಗೆ ಮತ್ತು ಹಿಂದೂ ದೇವರುಗಳಿಗೆ ಅಪಮಾನ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.