ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ, ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ: ಸಾಕ್ಷಿ ಮಲಿಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ , ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲವೇ ಅಲ್ಲ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹೇಳಿದ್ದಾರೆ.

ಈ ಮುಂಚೆ ಕುಸ್ತಿಪಟುಗಳು ಒಗ್ಗಟ್ಟಾಗಿರದ ಕಾರಣ ಹಲವು ವರ್ಷಗಳ ಕಾಲ ಕಿರುಕುಳವನ್ನು ಸಹಿಸಿಕೊಂಡು ಮೌನವಾಗಿದ್ದರು ಎಂದು ಸಾಕ್ಷಿ ಮಲಿಕ್ ಅವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ. ಈ ವೇಳೆ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಸಹ ಜೊತೆಗಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಸುಳ್ಳುಗಳನ್ನು ಸೃಷ್ಟಿಸಲಾಗುತ್ತಿದೆ. ಈ ಬಗ್ಗೆ ವದಂತಿಗಳ ತೆರವುಗೊಳಿಸಲು ತಾವು ಬಯಸಿರುವುದಾಗಿ ಕಡಿಯನ್ ಹೇಳಿದ್ದಾರೆ.

“ನಮ್ಮ ಪ್ರತಿಭಟನೆಯು ರಾಜಕೀಯ ಪ್ರೇರಿತವಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ. ನಾವು ಜನವರಿಯಲ್ಲಿ ಜಂತರ್ ಮಂತರ್ಗೆ ಬಂದಿದ್ದೇವೆ ಮತ್ತು ಪ್ರತಿಭಟನೆಗೆ ಪೊಲೀಸರ ಅನುಮತಿ ಪಡೆದುಕೊಂಡಿದ್ದೇವೆ” ಎಂದು ಕಡಿಯನ್ ಹೇಳಿದ್ದಾರೆ. “ಇದು ಕಾಂಗ್ರೆಸ್ ಬೆಂಬಲಿತ ಪ್ರತಿಭಟನೆ ಅಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!