ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಟ್ರೈಡೆಂಟ್ ಹೋಟೆಲ್ ಕಟ್ಟಡದಿಂದ ಹೊಗೆ ಬರುತ್ತಿದ್ದು ಗೊಂದಲದ ವಾತಾವರಣ ಉಂಟಾಗಿದೆ. ಕಟ್ಟಡದ ಮೇಲಿನಿಂದ ದಟ್ಟ ಹೊಗೆ ಬರುತ್ತಿರುವುದನ್ನು ಕಂಡು ನಿವಾಸಿಗಳು ಆತಂಕಗೊಂಡಿದ್ದಾರೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದರಿಂದ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಟ್ರೈಡೆಂಟ್ ಹೋಟೆಲ್ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿದೆ. ಈ ಪ್ರದೇಶ ಯಾವಾಗಲೂ ಜನಸಂದಣಿಯಿಂದ ಕೂಡಿರುತ್ತದೆ. ಬೆಳಗ್ಗೆ 7 ಗಂಟೆ ವೇಳೆಗೆ ಹೊಟೇಲ್‌ನ ಮೇಲ್ಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡು ಭಯದ ವಾತಾವರಣ ಉಂಟಾಯಿತು. ಹೋಟೆಲ್‌ನಿಂದ ಹೊಗೆ ಬರುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಆದರೆ ಹೊಟೇಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಇತ್ತು. ಇದಕ್ಕೆ ಮುಂಬೈ ಪೊಲೀಸರು ಪ್ರತಿಕ್ರಿಯಿಸಿದ್ದು, ಬೆಂಕಿ ಅವಘಡದ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಹೊಟೇಲ್‌ನ ಬಾಯ್ಲರ್ ಕೊಠಡಿಯಿಂದ ಹೊಗೆ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಅವಘಡ ಸಂಭವಿಸಿಲ್ಲ ಎಂದು ತಿಳಿದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.