CRIME| ಹಾಡಹಗಲೇ‌, ನಡುರಸ್ತೆಯಲ್ಲಿ ಬರ್ಬರ ಹತ್ಯೆ: ಭಯಾನಕ ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಗಲು ಹೊತ್ತಿನಲ್ಲೇ ಫುಟ್‌ಪಾತ್‌ನಲ್ಲಿ ಎಲ್ಲರೂ ನೋಡುತ್ತಿರುವಾಗಲೇ ವ್ಯಕ್ತಿಯೊಬ್ಬನನ್ನು ಅಟ್ಟಿಸಿಕೊಂಡು ಹೋಗಿ ಕತ್ತಿಗಳಿಂದ ಬರ್ಬರ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹತ್ಯೆಯ ವಿಡಿಯೋ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಸಂತ್ರಸ್ತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ತಮಿಳುನಾಡಿನ ಕಾರೈಕುಡಿ ಜಿಲ್ಲೆಯಲ್ಲಿ ಭಾನುವಾರ ಈ ಕೊಲೆ ನಡೆದಿದೆ. 29ರ ಹರೆಯದ ಯುವಕನನ್ನು ಐದು ಮಂದಿ ಕಡಿದು ಕೊಂದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಮಧುರೈ ನಿವಾಸಿ ಅರಿವಳಗನ್ ಅಲಿಯಾಸ್ ವಿನೀತ್ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಹಿ ಹಾಕಲು ಪೊಲೀಸರು ಕರೆದಾಗ ಕೊಲೆ ನಡೆದಿದೆ. ಜನನಿಬಿಡ ರಸ್ತೆಯಲ್ಲಿ ವಿನೀತ್ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಐವರು ವಿನೀತ್‌ನನ್ನು ಸುತ್ತುವರೆದಿದ್ದಾರೆ. ವಿನೀತ್ ಪರಾರಿಯಾಗುವ ಯತ್ನದಲ್ಲಿದ್ದ ಆತನನ್ನು ಕೊಲೆ ಮಾಡಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸಹಾಯಕ್ಕೆ ಬಂದರೂ ಪ್ರಯೋಜನವಾಗಲಿಲ್ಲ. ವಿನೀತ್ ನನ್ನು ರಸ್ತೆಯಲ್ಲೇ ಕೊಂದು ಐವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪೊಲೀಸರು ಆತನ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿನೀತ್ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿದ್ದು, ಇಬ್ಬರು ಸ್ನೇಹಿತರೊಂದಿಗೆ ಲಾಡ್ಜ್‌ನಲ್ಲಿ ತಂಗಿದ್ದ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!