ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತ.. ಎಂಬ ಮಾತು ಈಗ ಜನರನ್ನು ಕಾಡುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವವರು ಮಾತ್ರವಲ್ಲದೆ ಆರೋಗ್ಯವಂತರು ಮತ್ತು ಫಿಟ್ ಆಗಿರುವವರೂ ಈ ಮಾರಣಾಂತಿಕ ಕಾಯಿಲೆಗೊಳಗಾಗುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಚಿಕ್ಕವರು, ದೊಡ್ಡವರು ಎಂಬ ಭೇದವಿಲ್ಲದೆ ಎಲ್ಲರನ್ನು ಕಾಡುತ್ತಿದೆ. ಈ ಬೆಳವಣಿಗೆ ಆತಂಕಕಾರಿಯಾಗಿದ್ದು, ಮಧ್ಯಪ್ರದೇಶದಲ್ಲಿ ನಡೆದ ಘಟನೆ ಜನರನ್ನು ಮತ್ತಷ್ಟು ಆತಂಕಕ್ಕೀಡುಮಾಡಿದೆ.
ಅಶೋಕ್ ಸೋಲಂಕಿ ಎಂಬ ವ್ಯಕ್ತಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕ್ ನಲ್ಲಿ ಹೋಗುತ್ತಿದ್ದ. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕುಸಿದುಬಿದ್ದಿದ್ದಾರೆ. ಸ್ಥಳೀಯರು ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಅಶೋಕ್ ಸೋಲಂಕಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೆಲ್ಲ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.