ಅಮೆರಿಕಕ್ಕೆ ಮೋದಿ ಭೇಟಿ: ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 21 ರಿಂದ ಜೂನ್‌ 24ರ ವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಅಮೆರಿಕ ಸಜ್ಜಾಗಿದೆ.

ಮೋದಿಯವರ ಆಗಮನವನ್ನು ಸ್ವಾಗತಿಸಲು ಸಾವಿರಾರು ಅನಿವಾಸಿ ಭಾರತೀಯರು ತುದಿಗಾಲ ಮೇಲೆ ನಿಂತಿದ್ದಾರೆ. ಮೋದಿಯವರ ಪ್ರವಾಸದ ವೇಳೆ ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಮೋದಿ ಕಾರ್ಯಕ್ರಮದ ಸಂಪೂರ್ಣ ವೇಳಾಪಟ್ಟಿ:

ಜೂನ್‌ 20ರಂದೇ ಮೋದಿ ಅವರು ಅಮೆರಿಕಗೆ ತೆರಳಿದ್ದಾರೆ. ಜೂನ್‌ 21ರಂದು ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಮೋದಿ ನೇತೃತ್ವದಲ್ಲೇ ಯೋಗ ಕಾರ್ಯಕ್ರಮ ನಡೆಯಲಿದೆ. ಇದೇ ದಿನ ವಾಷಿಂಗ್ಟನ್‌ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹಾಗೂ ಅವರ ಪತ್ನಿ ಜತೆ ಭೋಜನಕೂಟದಲ್ಲಿ ಭಾಗಿಯಾಗಲಿದ್ದಾರೆ.

ಜೂನ್‌ 22ರಂದು ಯುಎಸ್ ಸಂಸತ್ತಿನ ಉಭಯ ಸದನಗಳ ಸದಸ್ಯರು ಭಾಗವಹಿಸುವ ಯುಎಸ್ ಕಾಂಗ್ರೆಸ್​ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೂನ್‌ 23ರಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಜತೆ ಊಟ, ಪ್ರಮುಖ ಕಂಪನಿಗಳ ಸಿಇಒಗಳ ಜತೆ ಸಭೆ, ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೆಯೇ, ಸಾವಿರಾರು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ವಾಷಿಂಗ್ಟನ್‌ ಡಿಸಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ.

ಪ್ರಧಾನಿ ಮೋದಿ ಭೇಟಿಯು ಅದ್ಧೂರಿ ಸ್ವಾಗತ, ಕಾರ್ಯಕ್ರಮ, ಒಪ್ಪಂದ, ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿ ಹತ್ತಾರು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!