ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ನಲ್ಲಿ 458 ಕಾನ್‌ಸ್ಟೇಬಲ್ (ಡ್ರೈವರ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜೊತೆಗೆ ಕನಿಷ್ಟ 21 ರಿಂದ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪಿಇಟಿ, ಪಿಎಸ್ಟಿ, ಲಿಖಿತ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆ / ಪರಿಶೀಲನಾ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 100 ರೂ. ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇ-ಸೈನಿಕರಿಗೆ ಸೇರಿದ ಅಭ್ಯರ್ಥಿಗಳು ಶುಲ್ಕ ವಿನಾಯಿತಿ ಹೊಂದಿರುತ್ತಾರೆ.
ಈ ಹುದ್ದೆಗಳಿಗೆ ಜೂನ್ 27 ರಿಂದ ಜುಲೈ 26,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.