ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಶೆಟ್ಟರ್ ಸಹಿತ ಮೂವರಿಗೆ ಟಿಕೆಟ್ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 30ರಂದು ರಾಜ್ಯ ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕಾಂಗ್ರೆಸ್​​ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ (Jagadish Sjettar) ಕಾಂಗ್ರೆಸ್ ಟಿಕೆಟ್ ನೀಡಿದೆ .ಜೊತೆಗೆ ಎನ್‌ಎಸ್ ಬೋಸರಾಜು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣ ಕಮಕನೂರ್​ ಅವರಿಗೂ ಟಿಕೆಟ್​​ ಘೋಷಣೆ ಮಾಡಲಾಗಿದೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಂಗಳವಾರ (ಜೂನ್ 20) ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಜೂನ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್‌ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಆ ನಂತರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!