ಲೈಂಗಿಕ ಕಿರುಕುಳ ಆರೋಪ: ಜನಪ್ರಿಯ ಧಾರಾವಾಹಿ ನಿರ್ಮಾಪಕನ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಂದಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಕಾರ್ಯಕ್ರಮದ ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಲಾಗಿದೆ.

ಕಳೆದ 15 ವರ್ಷಗಳಿಂದ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯಲ್ಲಿ ಕೆಲಸ ಮಾಡುತ್ತಿದ್ದ ನಟಿಯೊಬ್ಬರು ಇತ್ತೀಚೆಗೆ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿದ್ದರು. ಇದೀಗ ಅದೇ ನಟಿ ಪೊವಾಯಿ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸೇರಿ ಮೂವರ ವಿರುದ್ಧ ಲಿಖಿತ ದೂರನ್ನು ದಾಖಲಿಸಿದ್ದಾರೆ.

ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯ ನಿರ್ಮಾಪಕ ಅಸಿತ್‌ ಕುಮಾರ್‌ ಮೋದಿ ಅವರು ನನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಈ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಾಜೆಕ್ಟ್ ಹೆಡ್ ಸೊಹೈಲ್ ರಮಣಿ ಮತ್ತು ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರು ನಟಿಯ ದೂರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 509 (ಮಹಿಳೆಯೊಬ್ಬಳ ಮೇಲಿನ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!