ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕೆಟ್ ಮನಿ ಕೊಡಲಿಲ್ಲವೆಂದು ಮಗನೇ ಅಪ್ಪನನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ.
ತಂದೆಯ ಬಳಿ ಖರ್ಚಿಗಾಗಿ 2,000 ರೂಪಾಯಿಯನ್ನು ಪಾಕೆಟ್ ಮನಿಯಾಗಿ ನೀಡಲು ಮಗ ಕೇಳಿದ್ದಾನೆ. ಹಣ ಕೊಡಲು ನಿರಾಕರಿಸಿದ್ದರಿಂದ ಕೋಪದಲ್ಲಿ ಅಲ್ಲೇ ಇದ್ದ ಕಲ್ಲನ್ನು ತೆಗೆದುಕೊಂಡು ಮಗನೇ ತಂದೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಬು ಚೌಧರಿ (50) ಎಂಬ ರೈತ ಜೂನ್ 15ರ ರಾತ್ರಿ ದೇಪಾಲ್‌ಪುರ ಪ್ರದೇಶದ ಹೊಲವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು. ಅಪರಾಧ ನಡೆದ ಸ್ಥಳದಲ್ಲಿ ಸಂಗ್ರಹಿಸಿದ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಮೃತನ ಮಗ ಸೋಹನ್‌ನನ್ನು ಬಂಧಿಸಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ.
ಆರೋಪಿಯು ಮಾದಕ ವ್ಯಸನಿಯಾಗಿದ್ದು ತಂದೆಗೆ ತಮ್ಮ ಜಮೀನಿನ ಕೆಲಸದಲ್ಲಿ ಸಹಾಯ ಮಾಡುತ್ತಿದ್ದ. ತಂದೆ ದುಡ್ಡು ಕೊಡಲು ನಿರಾಕರಿಸಿದ್ದಕ್ಕಾಗಿ ಮಗ ಹತ್ಯೆ ಮಾಡಿದ್ದಾನೆ ಎಂದು
ತನಿಖಾಧಿಕಾರಿಗಳು ಹೇಳಿದ್ದಾರೆ.
ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.