ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪತ್ನಿ ಪಾರ್ವತಿ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ 11.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆಯಾಗಿದೆ.
ಇಂದು ಬೆಳಗ್ಗೆ 9.50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಡಬೇಕಿತ್ತು. ಆದರೆ ಈಗ ಬೆಳಗ್ಗೆ 11.30ಕ್ಕೆ ಎಚ್ಎಎಲ್ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ತಮ್ಮ ಪತ್ನಿಯ ಆರೋಗ್ಯವನ್ನು ವಿಚಾರಿಸಿಕೊಂಡು ಬಳಿಕ ದೆಹಲಿಗೆ ತೆರಳಲಿದ್ದಾರೆ.