ಕೊಡಗಿನ ಜನತೆಗೆ ಸೀಮೆಎಣ್ಣೆ ವಿತರಿಸಲು ಒತ್ತಾಯ

ಹೊಸದಿಗಂತ ವರದಿ ಮಡಿಕೇರಿ:

ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ಪಡಿತರ ವ್ಯವಸ್ಥೆಯಡಿ ಸೀಮೆ ಎಣ್ಣೆಯನ್ನು ವಿತರಿಸಬೇಕೆಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಎನ್.ಎ.ರವಿಬಸಪ್ಪ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾಗೆ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗುತ್ತಿದ್ದು, ಮುಂದಿನ ಮೂರು ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರು ವಿದ್ಯುತ್ ಇಲ್ಲದೆ ತೀವ್ರ ತೊಂದರೆ ಅನುಭವಿಸಲಿದ್ದಾರೆ. ಈ ಹಿಂದೆ ಬಿಪಿಎಲ್ ಪಡಿತರದಾರರಿಗೆ 5 ಲೀಟರ್ ಹೇಗೂ Apl ಪಡಿತರ ಚೀಟಿದಾರರಿಗೆ 3 ಲೀಟರ್ ಸೀಮೆಯನ್ನು ವಿತರಿಸಲಾಗುತ್ತಿತ್ತು. ಆದರೆ ಕೆಲವು ಸಮಯದ ನಂತರ ಅದು ಸ್ಥಗಿತಗೊಂಡಿದೆ ಎಂದು ಗಮನಸೆಳೆದಿದ್ದಾರೆ.

ಈ ಸಂಬಂಧ ಜಿಲ್ಲೆಯ ಶಾಸಕರು ಗಮನಹರಿಸಿ ಕೂಡಲೇ ಸೀಮೆಎಣ್ಣೆಯನ್ನು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಮೂಲಕ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಗೃಹಜ್ಯೋತಿ ನೋಂದಣಿಗೆ ಆಕ್ಷೇಪ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲರಿಗೂ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಅದರಂತೆ ಉಚಿತ ವಿದ್ಯುತ್ ನೀಡುವ ವ್ಯವಸ್ಥೆ ಮಾಡಬೇಕಾಗಿದೆ. ಅದನ್ನು ಬಿಟ್ಟು ನೋಂದಣಿ ಕಾರ್ಯ ಆರಂಭಿಸಿರುವುದು ವಿಪರ್ಯಾಸ ಎಂದಿರುವ ರವಿ ಬಸಪ್ಪ, ಈ ಕೂಡಲೇ ನೋಂದಣಿ ಕೈಬಿಟ್ಟು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!