ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತ್ನಿಯ ಅನಾರೋಗ್ಯ ಹಿನ್ನೆಲೆ ಸಿಎಂ ದೆಹಲಿ ಪ್ರವಾಸದಲ್ಲಿ ಮುಂದೂಡಿಕೆಯಾಗಿದ್ದು, ಇದೀಗ ಸಿಎಂ ಪತ್ನಿ ಆರೋಗ್ಯ ವಿಚಾರಿಸಿ ದೆಹಲಿಗೆ ತೆರಳುತ್ತಿದ್ದಾರೆ.
ಎಂಐಸಿಯುನಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ರಾಷ್ಟ್ರಪತಿಗಳು ಹಾಗೂ ಕೇಂದ್ರ ಸಚಿವರುಗಳನ್ನು ಸಿಎಂ ಭೇಟಿ ಮಾಡಲಿದ್ದು, ಅಕ್ಕಿ ವಿಚಾರವಾಗಿಯೂ ಚರ್ಚೆ ನಡೆಸಲಿದ್ದಾರೆ.