ಕಿಮ್ಸ್ ಆಸ್ಪತ್ರೆಗೆ ಸಚಿವ ಪ್ರಲ್ಹಾದ ಜೋಶಿ ಭೇಟಿ

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರದ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ‌ಯಡಿ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ತುರ್ತು ಚಿಕಿತ್ಸಾ ಘಟಕದ‌ ನೂತನ ಘಟಕ್ಕೆ ಭೇಟಿ ನೀಡಿ ಕಾಮಗಾರಿ ಜೊತೆಗೆ ರೋಗಿಗಳ ಆರೋಗ್ಯ ಸಹ ವಿಚಾರಿಸಿದರು. ಆಸ್ಪತ್ರೆಗೆ ದಾಖಲಾಗಿದ್ದ ಲಕ್ಷ್ಮೇಶ್ವರ ನಿವಾಸಿ ಸಿಂಕದರ ಕಣಕೆ ಅವರ ಆರೋಗ್ಯ ಬಗ್ಗೆ ವಿಚಾರಿಸಿದರು.

ಕಿಮ್ಸ್ ಆಸ್ಪತ್ರೆ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ನೂತನ ತುರ್ತು ಚಿಕಿತ್ಸಾ ಘಟಕದ ಕಟ್ಟದ ಬಗ್ಗೆ ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಿಮ್ಸ್ ಆವರಣದಲ್ಲಿ ಸುಮಾರು 60 ಕೋಟಿ ವೆಚ್ಚದಲ್ಲಿ ತುರ್ತುಚಿಕಿತ್ಸಾ ಘಟಕದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. 23 ಕೋಟಿ ವೆಚ್ಚದಲ್ಲಿ ಹಾಸ್ಟೆಲ್, 20 ಕೋಟಿ ರೂ., 20 ಕೋಟಿ ಸಲಕರಣೆಗಳು ಖರೀದಿಸಲಾಗುತ್ತಿದೆ ಎಂದರು.

ಈಗಾಗಲೇ ಮೊದಲ ಕಟ್ಟಡದ ಕಾಮಗಾರಿ ಮುಗಿದಿದ್ದು, ಅಗತ್ಯತೆ ಇರುವುದರಿಂದ ಚಿಕಿತ್ಸೆ ಆರಂಭಿಸಲಾಗಿದೆ. ಕೆಲ ದಿನದಲ್ಲಿ ಹಾಸ್ಟೆಲ್ ಕಾಮಗಾರಿ ಮುಗಿಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಆದಷ್ಟು ಬೇಗ ಉದ್ಘಾಟಿಸಲಾಗುತ್ತದೆ ಎಂದು ತಿಳಿಸಿದರು.

ಮೂಲ ಸೌಕರ್ಯ ಒದಗಿಸಲಾಗುತ್ತಿದ್ದು, ಸಿಬ್ಬಂದಿ ಕೊರತೆ ನಿಗಿಸಲು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಲಾಗುವುದು. ಹಿಂದೆ‌ ಬಿಜೆಪಿ‌ ಸರ್ಕಾರ ವಿದ್ದಾಗ 11 ನೂರು ಸಿಬ್ಬಂದಿ ನೇಮಕ್ಕೆ ಆದೇಶಿಸಲಾಗಿತ್ತು. ಈಗ ಸಚಿವ ಗಮನಕ್ಕೆ ತಂದು ಸಿಬ್ಬಂದಿ ನೇಮಕ ಮಾಡಿಕೊಳ್ಳುಲು ಸೂಚಿಸಲಾಗುತ್ತದೆ ಎಂದರು. ಜಯದೇವ ಆಸ್ಪತ್ರೆ ಕಾಮಗಾರಿ ಸದ್ಯದಲೇ ಆರಂಭವಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!