ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಕಳೆದ ಒಂದು ವರ್ಷ ಎಂಟು ತಿಂಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಡಾ.ಬಿ.ಸಿ.ಸತೀಶ ಅವರು ಅಧಿಕಾರ ಹಸ್ತಾಂತರಿಸಿದರು.
ಸತೀಶ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದ್ದು, ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.