ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ನೀಡಿ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ(Egg), ಬಾಳೆ ಹಣ್ಣು(banana) ವಿತರಿಸಲು ಸರ್ಕಾರ ಆದೇಶಿಸಿದೆ.

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ(Students) ಮೊಟ್ಟೆ ವಿತರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರುಸುತ್ತೋಲೆ ಹೊರಡಿಸಿದೆ.

ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ (ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಿಸುವಂತೆ ಸೂಚಿಸಿದ್ದಾರೆ.

ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟೆ/ಬಾಳೆ ಹಣ್ಣು/ಶೇಂಗಾ ಚಿಕ್ಕಿಯ ಘಟಕ ವೆಚ್ಚ 8ರೂ.ರಂತೆ ನಿಗದಿಪಡಿಸಿರುತ್ತದೆ. ಇದರಂತೆ ಭರಿಸಲು ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!