65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸರತಿ ಸಾಲು ಇಲ್ಲದೆ ದೇವರ ದರುಶನಕ್ಕೆ ಅವಕಾಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇತ್ತೀಚಿನ ದಿನಗಳಲ್ಲಿ ದೇಗುಲದಲ್ಲಿ ಜನರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಹಿರಿಯರಿಗೆ ಸರಿಯಾಗಿ ದೇವರ ದರುಶನ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ಕುರಿತು ಮನಗಂಡ ರಾಜ್ಯ ಮುಜರಾಯಿ ಇಲಾಖೆ, ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿವೆ.

ಈ ಕುರಿತು ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಆಂಧ್ರಪ್ರದೇಶದಂತೆ ರಾಜ್ಯದಲ್ಲೂ ಹಿರಿಯ ನಾಗರೀಕರಿಗಾಗಿ ವಿಶೇಷ ಸವಲತ್ತು ನೀಡಲಾಗುವುದು. ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಹಿರಿಯ ನಾಗರೀಕರು ಸಾಮಾನ್ಯ ಕ್ಯೂನಲ್ಲಿ ನಿಲ್ಲುವಂತಿಲ್ಲ. ದೇವಸ್ಥಾನಗಳಲ್ಲಿ ಇನ್ನುಮುಂದೆ ಹಿರಿಯ ನಾಗರಿಕರಿಗೆ ಡೈರೆಕ್ಟ್ ಎಂಟ್ರಿ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಹಿರಿಯ ನಾಗರೀಕರಿಗಾಗಿ ವಿಶೇಷ ಕ್ಯೂ ವ್ಯವಸ್ಥೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ವಯಸ್ಸಾದವರು ಸಾಮಾನ್ಯ ಕ್ಯೂನಲ್ಲಿ ನಿಂತು ಹೋಗಲು ಸಾಧ್ಯವಿಲ್ಲ. ಸಹಜವಾಗಿ ಕೆಲವರಿಗೆ 65 ವರ್ಷ ಆದ ನಂತ್ರ ತುಂಬಾ ಹೊತ್ತು ನಿಲ್ಲಲು ಸಾಧ್ಯವಾಗುವುದಿಲ್ಲ. ಅದಕ್ಕೆ ಅವರಿಗೆಲ್ಲಾ ಬೇರೆ ಕ್ಯೂ ಮಾಡಲು ತಿಳಿಸಿದ್ದೇನೆ. ಆನ್ಲೈನ್ ಬುಕ್ಕಿಂಗ್‌ನಲ್ಲೂ ವಿಶೇಷವಾಗಿ ಹಿರಿಯರಿಗೆ ವಸತಿಗಳನ್ನು ಕೊಡಲು ತಿಳಿಸಿದ್ದೇನೆ. ಎಲ್ಲ ದೇವಸ್ಥಾನಗಳು ಸ್ವಚ್ಛವಾಗಿರಬೇಕು. ದೇವಸ್ಥಾನಗಳಲ್ಲಿ ಕುಡಿಯುವ ನೀರು ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಇನ್ನು ಹಿರಿಯ ನಾಗರಿಕರಿಗೆ ನೇರ ದರುಶನಕ್ಕೆ ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಿಗೆ ಮಾತ್ರ ಸೀಮಿತವಾಗಿರಲಿದೆ. ಆದರೆ, ಖಾಸಗಿ ಆಡಳಿತ ಮಂಡಳಿಯ, ಧಾರ್ಮಿಕ-ದತ್ತಿ ಸಮಿತಿಗಳಿಂದ ನಡೆಯುವ ಹಾಗೂ ಟ್ರಸ್ಟ್‌ಗಳಿಂದ ನಡೆಯುವ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರುಶನಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಯಾವುದೇ ತೀರ್ಮಾನವನ್ನು ಮಾಡಿಲ್ಲ. ಇದರಿಂದಾಗಿ, ಧರ್ಮಸ್ಥಳ, ಉಡುಪಿ ಅಷ್ಟಮಠಗಳು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ನೇರ ದರುಶನಕ್ಕೆ ಬಗ್ಗೆ ಯಾವುದೇ ಸ್ಪಷ್ಟ ಆದೇಶ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!