ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ನಾಳೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಜೂನ್ 23, 30, ಜುಲೈ 7, 10 ಹಾಗೂ 14ರಂದು ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳು ಪ್ರವೇಶಿಸುವಂತಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿಸಲಾಗಿದ್ದು, ಜನರು ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.