ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘೋರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಶ್ರೀಕಾಂತ್ ಎಂಬಾತ ತನ್ನ ಇಬ್ಬರು ಮಕ್ಕಳಾದ 3 ವರ್ಷದ ಆದಿತ್ಯ ಮತ್ತು 4 ವರ್ಷದ ಅಮೂಲ್ಯಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾನೆ. ಮಕ್ಕಳನ್ನು ಸಾಯಿಸಿದ ಬಳಿಕ ಪತ್ನಿಯ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಪತ್ನಿ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ಮೂಲದ ಕುಟುಂಬವು ಮರಳಗಾಲದಲ್ಲಿ ನೆಲೆಸಿದ್ದರು. ಈ ಕೃತ್ಯದ ಬಳಿಕ ಆರೋಪಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.