ಹೊಸದಿಗಂತ ವರದಿ ಕುಪ್ಪೆಪದವು:
ಖಾಸಗಿ ಬಸ್ ಗುದ್ದಿ ಯುವಕನೋರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಗುರುಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ (30) ಮೃತ ದುರ್ದೈವಿ. ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಕೆಲಸಕ್ಕಿರುವ ಸಂತೋಷ್ ಕೆಲಸಕ್ಕೆ ಹೋಗುತ್ತಿದ್ದಾಗ ಮೂಡಬಿದ್ರಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಗುದ್ದಿದ್ದು, ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿದ್ದು ತಕ್ಷಣ ಸಂತೋಷ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಸಂತೋಷ್ ಮೃತಪಟ್ಟಿದ್ದರು. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.