ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಒಟ್ಟು 607 ಜ್ಯೂನಿಯರ್ ಅಸಿಸ್ಟೆಂಟ್, ಎಸ್‌ಡಿಎ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳಿಗನುಸಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,600/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.