ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ (KFCSC) ಖಾಲಿ ಇರುವ ಒಟ್ಟು 386 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವ್ಯವಸ್ಥಾಪಕರು, ಹಿರಿಯ ಮತ್ತು ಕಿರಿಯ ವ್ಯವಸ್ಥಾಪಕರು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.
ಈ ಹುದ್ದೆಗಳಿಗೆ ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 83,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 22,2023ರೊಳಗೆ ಅರ್ಜಿಯನ್ನು ಹಾಕಬಹುದು.