ಬೆಂಗಳೂರು,ಅಹಮದಾಬಾದ್ ನಲ್ಲಿ ಹೊಸ ಕಾನ್ಸುಲೇಟ್ ಕಚೇರಿ ಆರಂಭ: ಶ್ವೇತಭವನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಪ್ರಧಾನಿ ಮೋದಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಇದರ ನಡುವೆ ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಅಮೆರಿಕದ ಎರಡು ಹೊಸ ಕಾನ್ಸುಲೇಟ್ ಕಚೇರಿಗಳನ್ನು ತೆರೆಯಲು ಉದ್ದೇಶಿಸಿದ್ದು, ಅದೇ ರೀತಿ ಭಾರತ ಸಹ ಸಿಯಾಟಲ್ನಲ್ಲಿ ತನ್ನ ರಾಜತಾಂತ್ರಿಕ ಕಚೇರಿ ಆರಂಭಿಸಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿತಿಳಿಸಿದ್ದಾರೆ.

ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಬೇಕು ಎಂಬ ದೃಷ್ಟಿಯಿಂದ ಹೊಸ ಕಾನ್ಸುಲೇಟ್ ಕಚೇರಿ ತೆರೆಯಲು ಉದ್ದೇಶಿಸಿದ್ದು,
ಅಮೆರಿಕದ ಇನ್ನೂ ಕೆಲವು ನಗರಗಳಲ್ಲಿ ಭಾರತ ತನ್ನ ಕಾನ್ಸುಲೇಟ್ ಕಚೇರಿ ಆರಂಭಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 125,000 ವೀಸಾಗಳನ್ನು ನೀಡಿದೆ ಎಂದು ಶ್ವೇತಭವನದ ಅಧಿಕಾರಿ ತಿಳಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷ ಶೇಕಡಾ 20 ರಷ್ಟು ಹೆಚ್ಚಳದೊಂದಿಗೆ ಯುನೈಟೆಡ್ ಸ್ಟೇಟ್ಸ್ನಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿದ್ದಾರೆ ಎಂದು ಅಮೆರಿಕದ ಹಿರಿಯ ಆಡಳಿತ ಅಧಿಕಾರಿ ಹೇಳಿದ್ದಾರೆ.

ದೆಹಲಿಯಲ್ಲಿ ಅಮೆರಿಕದ ರಾಯಭಾರ ಕಚೇರಿ ಇದ್ದು, ಮುಂಬೈ, ಕೋಲ್ಕತ್ತಾ, ಚೆನ್ನೈ ಮತ್ತು ಹೈದರಾಬಾದ್ ನಲ್ಲಿರುವ ಕಾನ್ಸುಲೇಟ್ಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಅದೇ ರೀತಿ ಭಾರತ ಸಹ ಅಮೆರಿಕದ ವಾಷಿಂಗ್ಟನ್ ನಲ್ಲಿ ರಾಯಭಾರ ಕಚೇರಿ ಹೊಂದಿದ್ದು, ನ್ಯೂಯಾರ್ಕ್, ಸ್ಯಾನ್ ಫ್ರಾನ್ಸಿಸ್ಕೋ, ಚಿಕಾಗೋ, ಹೂಸ್ಟನ್ ಮತ್ತು ಅಟ್ಲಾಂಟಾ ಸೇರಿದಂತೆ ಐದು ಕಾನ್ಸುಲೇಟ್ಗಳನ್ನು ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!