ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ತಾರತಮ್ಯ ಅನ್ನೋದಿಲ್ಲ, ಪ್ರಜಾಪ್ರಭುತ್ವ ನಮ್ಮ ಡಿಎನ್ಎಯಲ್ಲಿಯೇ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ ಪ್ರಜಾಸತ್ತಾತ್ಮಕ ರಾಷ್ಟ್ರ, ಇಲ್ಲಿ ಜಾತಿ, ಮತ, ಧರ್ಮ, ಲಿಂಗಗಳ ಬೇಧ ಇಲ್ಲ. ಹಾಗೆಯೇ ಅಮೆರಿಕವೂ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ, ಭಾರತ ಹಾಗೂ ಅಮೆರಿಕ ನಡುವಿನ ಬಾಂಧವ್ಯಕ್ಕೆ ಆಕಾಶವೂ ಮಿತಿಯಲ್ಲ ಎಂದು ಹೇಳಿದ್ದಾರೆ.
ಈ ಎರಡೂ ದೇಶಗಳಲ್ಲಿ ಸಮಾನ ಅಂಶ ಎಂದರೆ ಪ್ರಜಾಪ್ರಭುತ್ವ, ಪ್ರಜಾಸತ್ತಾತ್ಮಕ ಮೌಲ್ಯಗಳೇ ಈ ದೇಶಗಳ ತಳಹದಿಯಾಗಿದೆ. ಇದು ಹೆಮ್ಮೆಯ ಸಂಗತಿಯಾಗಿದೆ. ಜಾಗತಿಕ ಶಾಂತಿಗಾಗಿ ಎರಡೂ ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತೇವೆ ಎಂದಿದ್ದಾರೆ.
ಉಭಯ ದೇಶಗಳು ಭಯೋತ್ಪಾದನೆ ಹಾಗೂ ಮೂಲಭೂತವಾದದ ವಿರುದ್ಧ ಹೋರಾಟ ನಡೆಸಬೇಕು, ಈ ಬಗ್ಗೆ ಜೋ ಬಿಡೆನ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದಿದ್ದಾರೆ. ವಿಶ್ವ ಎದುರಿಸುತ್ತಿರುವ ಸಮಸ್ಯೆಗಳನ್ನು ಮೆಟ್ಟಿ ನಿಲ್ಲೋದಕ್ಕೆ ಭಾರತ-ಅಮೆರಿಕ ದೇಶಗಳು ಜೊತೆಯಾಗಿ ನಿಲ್ಲಬೇಕು, ಈ ರೀತಿ ಒಪ್ಪಂದಕ್ಕೆ ಸಹಿ ಹಾಕಿರುವುದು ಮಹತ್ವದ್ದು ಎಂದಿದ್ದಾರೆ.