ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಫಲಾನುಭವಿಗಳಾಗಲು ರೈತರು ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ರೈತರು ಜೂನ್ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆ ಸೂಚನೆ ನೀಡಿದೆ.
ಈ ಯೋಜನೆಯಡಿ ಆದಾಯ ವೃದ್ಧಿಗೆ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ಫಲಾನುಭವಿಗಳು https://pmkisan.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಇ-ಕೆವೈಸಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.