ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 26 ಸಹಾಯಕ ವ್ಯವಸ್ಥಾಪಕರು, ಸಹಾಯಕರು, ಹಿರಿಯ ಸಹಾಯಕರು, ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27650/- ರಿಂದ 97100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.