ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ.
ರೋಹಿತ್ ಶರ್ಮಾ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಸರಣಿಗೆ ಅಜಿಂಕ್ಯ ರಹಾನೆಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿ ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರಗೆ ವಿಶ್ರಾಂತಿ ನೀಡಲಾಗಿದೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನ ಆಡಲಿದೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದರ ನಂತರ ಎರಡನೇ ಟೆಸ್ಟ್ ಪಂದ್ಯ ಜುಲೈ 20 ರಿಂದ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಕುರಿತು ಮಾತನಾಡುತ್ತಾ, ಇದು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಐದು ಪಂದ್ಯಗಳ ಟಿ 20 ಸರಣಿಯು ಆಗಸ್ಟ್ 3 ರಿಂದ ನಡೆಯಲಿದೆ.
ಟೆಸ್ಟ್ ಸರಣಿಗೆ ಭಾರತ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ಶುಭ್‌ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ(ಉಪನಾಯಕ), ಕೆ ಎಸ್ ಭರತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನಾದ್ಕತ್, ನವದೀಪ್ ಸೈನಿ.
ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.