ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಶುಕ್ರವಾರ ಸಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರಿಂದ ಜೂನ್ 30ರಂದು ಚುನಾವಣೆ (MLC By Election) ನಡೆಯಲ್ಲ. ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಇಂದು (ಜೂನ್ 23) ಕೊಮನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.