ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದರು.
ನಮ್ಮದು ರಾಷ್ಟ್ರೀಯ ಪಕ್ಷ, ಡೆಲ್ಲಿಯವರು ಅಂಗೀಕಾರ ಮಾಡಬೇಕಲ್ವಾ? ಪಾರ್ಲಿಮೆಂಟ್ ಚುನಾವಣೆಯಿದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿಯವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಹೇಳಿದರು.