ಹೊಸ ದಿಗಂತ ವರದಿ
ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಶನಿವಾರ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ರೈತ ನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಧೋಳಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬಸಪ್ಪ ಮಾದರ (35) ಎಂದು ಗುರುತಿಸಲಾಗಿದೆ. ಮತ್ತೊಬ್ಬ ರೈತ ವಿಠ್ಠಲ ಮಾದರ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವೇಳೆ ಇಬ್ಬರು ಮುಧೋಳ ತಾಲೂಕಿನ ಬಿಕೆ ಅಳಗುಂಡಿ ಗ್ರಾಮದ ತಮ್ಮ ಜಮೀನಿನಲ್ಲಿ ಬೋರ್‌ವೆಲ್‌ನ ವಿದ್ಯುತ್ ಮೋಟರ್ ಆನ್ ಮಾಡಲು ಹೋಗಿದ್ದರು. ಬಸಪ್ಪ ಸ್ಥಳದಲ್ಲೇ ಮೃತಪಟ್ಟರೆ, ವಿಠ್ಠಲ ಗಾಯಗೊಂಡಿದ್ದಾರೆ.