ಇಂದು ಈಜಿಪ್ಟ್‌ನ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಮೆರಿಕ ಪ್ರವಾಸದ ಬಳಿಕ ಈಜಿಪ್ಟ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಇಂದು ಈಜಿಪ್ಟ್‌ನ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ.

ಈಜಿಪ್ಟ್‌ನ ಕೈರೋದಲ್ಲಿರುವ 11ನೇ ಶತಮಾನದಲ್ಲಿ ನಿರ್ಮಾಣವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿರುವ ಅಲ್-ಹಕೀಮ್ ಮಸೀದಿಗೆ (Al-Hakim Mosque) ಭೇಟಿ ನೀಡಿ, ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಈ ಮೂಲಕ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯವು ಮತ್ತಷ್ಟು ಬಲಪಡಿಸಲಿದೆ.

ನಂತರ ಪ್ರಧಾನಿ ಮೋದಿ ಅವರು ಈಜಿಪ್ಟ್‌ನಲ್ಲಿ ನೆಲೆಸಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ಜನರ ನಡುವಿನ ಸಂಬಂಧವನ್ನು ಬೆಳೆಸುವುದು ಮಾತ್ರವಲ್ಲದೆ ಎರಡು ರಾಷ್ಟ್ರಗಳ ನಡುವಿನ ಆರ್ಥಿಕ ಬೆಳವಣಿಗೆ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಕೊಡುಗೆ ನೀಡಲು ವೇದಿಕೆಯನ್ನು ಕಲ್ಪಿಸುತ್ತದೆ.

ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್ – ಸಿಸಿ ತಮ್ಮ ದೇಶಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!