ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಯ ಪ್ರಭಾವದಿಂದಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಕಟ್ಟಡವೊಂದು ಕುಸಿದಿದೆ. ಈ ಕಟ್ಟಡದ ಅವಶೇಷಗಳಡಿಯಲ್ಲಿ ಮೂವರು ವ್ಯಕ್ತಿಗಳು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಧಾವಿಸಿದೆ. ಮುಂಬೈನ ಘಾಟ್ ಕೋಪರ್‌ನಲ್ಲಿ ಬಂಗಲೆಯ ಒಂದು ಭಾಗ ಕುಸಿದು ಅವಶೇಷಗಳಡಿಯಲ್ಲಿ ಮೂವರು ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಇನ್ನೂ ಒಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಮುಂಬೈ ನಗರದಲ್ಲಿ ಇದುವರೆಗೆ 104 ಮಿ.ಮೀ ಮಳೆಯಾಗಿದೆ. ಘಾಟ್‌ಕೋಪರ್‌ನ ಪೂರ್ವ ಉಪನಗರಗಳಲ್ಲಿ 123 ಮಿಮೀ ಮಳೆಯಾಗಿದೆ. ಪಶ್ಚಿಮ ಉಪನಗರಗಳಲ್ಲಿ 139 ಮಿ.ಮೀ ಮಳೆ ದಾಖಲಾಗಿದೆ. ಭಾರಿ ಮಳೆಯಿಂದಾಗಿ ಮುಂಬೈನ ರಸ್ತೆಗಳಲ್ಲಿ ಪ್ರವಾಹದಂತೆ ನೀರು ಹರಿಯುತ್ತಿದೆ.