ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆ ಪಡೆದಿರುವ ಮತ್ತು
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 30 ಸಾವಿರ ರೂ. ವೇತನ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 23,2023ರೊಳಗೆ ಅರ್ಜಿಯನ್ನು ಹಾಕಬಹುದು.