ರಾಜ್ಯಾದ್ಯಂತ ಗೃಹ ಜ್ಯೋತಿಗೆ ಎಲ್ಲೆಡೆ ಉತ್ತಮ ಸ್ಪಂದನೆ: 50 ಲಕ್ಷಕ್ಕೂ ಅಧಿಕ ನೋಂದಣಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹ ಜ್ಯೋತಿಗೆ ಎಲ್ಲೆಡೆ ಉತ್ತಮ ಸ್ಪಂದನೆ ಸಿಗುತ್ತಿದೆ .

ಆರಂಭಗೊಂಡ ಮೊದಲೆರಡು ದಿನ ಸರ್ವರ್ ಸಮಸ್ಯೆಯಿಂದಾಗಿ ನೋಂದಣಿ ಪ್ರಕ್ರಿಯೆ ವಿಳಂಬವಾಗಿತ್ತು. ಸಾಕಷ್ಟು ನೋಂದಣಿ ಕೇಂದ್ರಗಳಲ್ಲಿ ಜನ ಕ್ಯೂ ನಿಂತಿದ್ದು ಸರ್ವೇ ಸಾಮಾನ್ಯವಾಗಿತ್ತು. ಆದರೆ ಆ ಬಳಿಕ ಸರ್ವರ್ ಸಮಸ್ಯೆಗೆ ಹೊಸ ಲಿಂಕ್ ಬಿಡುಗಡೆಗೊಳಿಸಲಾಗಿತ್ತು. ಒಂದೇ ವಾರದಲ್ಲಿ 50 ಲಕ್ಷಕ್ಕೂ ಅಧಿಕ ನೋಂದಣಿ ಮಾಡಿಸಿಕೊಂಡಿದ್ದಾರೆ.

ದಿನಾಂಕ 25.06.2023ರ ಭಾನುವಾರ ಸಂಜೆ 6 ಗಂಟೆಯವರೆಗೆ 51,17,693 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಯಾವುದೇ ವಿದ್ಯುತ್ ಕಛೇರಿ, ನಾಡಕಚೇರಿ ಹಾಗೂ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಹಕರು ಮೇಲ್ಕಂಡ ವೆಬ್’ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್’ಸೈಟ್ ಬಳಸದೇ ಇರುವುದು ಸೂಕ್ತ. ಇದಲ್ಲದೇ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬುದನ್ನೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!