ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ.
ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ಓದುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಆಟೋದಲ್ಲಿ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಆಟೋ ಪಲ್ಟಿಯಾಗಿದೆ. ಅದರಲ್ಲಿದ್ದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.