100ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಟೇಕ್​ ಆಫ್​ ಆದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್​ನ ಸಮಯಪ್ರಜ್ಞೆಯಿಂದಾಗಿ 112 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 105 ಪ್ರಯಾಣಿಕರು ಮತ್ತು 7 ಸಿಬ್ಬಂದಿಯೊಂದಿಗೆ ವಿಮಾನ ಟೇಕ್ ಆಫ್ ಆಗಿತ್ತು. ಇದಾದ ಬಳಿಕ ವಿಮಾನ ಹಾರಾಟ ನಡೆಸಿದಾಗ ತಾಂತ್ರಿಕ ದೋಷವಿರುವುದು ಪೈಲಟ್‌ಗೆ ತಿಳಿದಿದೆ. ಕೂಡಲೇ ಚೆನ್ನೈ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ತುರ್ತಾಗಿ ಇಳಿಯಲು ಅನುಮತಿ ಕೋರಿದ್ದಾರೆ. ಹೀಗಾಗಿ ವಿಮಾನ ಟೇಕ್ ಆಫ್ ಆದ 20 ನಿಮಿಷದಲ್ಲಿ ಮತ್ತೆ ಚೆನ್ನೈ ಏರ್​ಪೋರ್ಟ್​ಗೆ ಮರಳಿ ತುರ್ತು ಭೂಸ್ಪರ್ಶಿಸಿದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ಕೂಡಲೇ ಫ್ಲೈಟ್ ಇಂಜಿನಿಯರ್ ತಜ್ಞರು ತಾಂತ್ರಿಕ ದೋಷ ಸರಿಪಡಿಸಲು ಯತ್ನಿಸಿದರು. ಸುಮಾರು ಒಂದು ಗಂಟೆಗಳ ಕಾಲ ವಿಮಾನದ ಸಮಸ್ಯೆಯನ್ನು ಸರಿಪಡಿಸಲು ಕಾಲಾವಕಾಶ ತೆಗೆದುಕೊಂಡರು. ಬಳಿಕ ವಿಮಾನ ಸುಮಾರು ಒಂದೂವರೆ ಗಂಟೆ ತಡವಾಗಿ ದುಬೈಗೆ ಹೊರಟಿತು. ಪೈಲಟ್ ಸಕಾಲದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಹಿಡಿದು ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ್ದರಿಂದ ಭಾರಿ ಅವಘಡವೊಂದು ತಪ್ಪಿದ್ದು, ಅದೃಷ್ಟವಶಾತ್ 112 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬಗ್ಗೆ ದೆಹಲಿಯ ವಿಮಾನ ನಿಲ್ದಾಣ ಪ್ರಾಧಿಕಾರವು ತನಿಖೆಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!