ಬೈಕ್‌ಗೆ ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಪುಲಕೇಶಿನಗರದ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಯೂಸುಫ್ (19) ಫರಜ್ (19) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಹೊರ ರಾಜ್ಯದ ನಿವಾಸಿಗಳಾಗಿದ್ದು, ಹೊಟೇಲ್​​ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ತಡರಾತ್ರಿ ಬೈಕ್ ನಲ್ಲಿ ಬರುತ್ತಿರುವ ವೇಳೆ ಒನ್ ವೇ ಯಲ್ಲಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಟಿಪ್ಪರ್ ಲಾರಿ ಚಾಲಕ ಸುನೀಲ್ ಎಂಬುವವನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!