ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಖಾಲಿ ಇರುವ 5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿವಿಧ ಇಲಾಖೆಗಳಲ್ಲಿನ 5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ವಿಪಕ್ಷದವರು ಎಷ್ಟೇ ಆರೋಪ ಮಾಡಿದರೂ ಕೂಡ ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಕಷ್ಟವಾದರೂ ಸರಕಾರ ಜಾರಿ ಮಾಡಲಿದೆ ಎಂದು ಅವರು ತಿಳಿಸಿದರು.