ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ರೈಲು ವಾರಣಾಸಿಯಿಂದ ದೆಹಲಿಗೆ ತೆರಳುತ್ತಿರುವ ವೇಳೆ ತುಂಡ್ಲಾ ಬಳಿಯ ಜಲೇಸರ್ ಮತ್ತು ಪೋರಾ ಪಟ್ಟಣಗಳ ನಡುವೆ ಈ ದುರಂತ ಸಂಭವಿಸಿದೆ.
ವ್ಯಕ್ತಿಯೋರ್ವ ರೈಲ್ವೇ ಹಳಿ ದಾಟಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ಘಟನೆಯ ಬಗ್ಗೆ ನಿಖರವಾದ ಮಾಹಿತಿಯು ತನಿಖೆಯ ನಂತರವೇ ತಿಳಿದುಬರಲಿದೆ.