ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಮೈಸೂರು Express Highwayನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಮನಗರಜಿಲ್ಲೆಯ ಜಯಪುರ ಗೇಟ್ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ.ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಡಿವೈಡ್ ಹಾರಿ ಎದುರು ಬದಿಯ ರಸ್ತೆಗೆ ಬಂದು ಬಸ್ ನಿಂತಿದೆ.
ಅದೃಷ್ಟವಶಾತ್ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿದ್ದಂತ ಬೇರೆ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಬಸ್ಸಿನಲ್ಲಿದ್ದಂತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.