ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಲಿದ್ದೇನೆ.ಯಾವುದೋ ಟ್ರಿಬ್ಯುನಲ್ ಮಾಡೋಕೆ ಹೊರಟಿದ್ದಾರೆ. ಅದು ನಮ್ಮ ರಾಜ್ಯಕ್ಕೆ ಮಾರಕವಾಗಲಿದೆ ಎಂದರು.
ಇದೇ ವಿಚಾರವಾಗಿ ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದರು.