ಹೊಸದಿಗಂತ ಡಿಜಿಟಲ್ ಡೆಸ್ಕ್:
ತ್ರಿಪುರಾದಲ್ಲಿ ರಥಯಾತ್ರೆ ವೇಳೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.
ಇಲ್ಲಿನ ಉನಕೋಟಿ ಜಿಲ್ಲೆಯ ಕುಮಾರ್ಘಾಟ್ನಲ್ಲಿ ರಥಕ್ಕೆ ಹೈಟೆನ್ಷನ್ ತಂತಿ ಸ್ಪರ್ಶಿಸಿದ್ದು ಇಬ್ಬರು ಮಕ್ಕಳ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
ಬೆಳಗ್ಗೆಯಿಂದಲೇ ಮಳೆಯಾಗುತ್ತಿದ್ದು ರಥ ಯಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಉಲ್ಟೋ ರಥ ಯಾತ್ರೆಯ ಸಂದರ್ಭದಲ್ಲಿ ಭಕ್ತರು ರಥವನ್ನು ಎಳೆಯುತ್ತಿದ್ದಾಗ ಮೇಲಿನ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ ಅನಾಹುತ ಸಂಭವಿಸಿದೆ ಎಂದು ಎಸ್ಡಿಪಿಒ ಕುಮಾರಘಾಟ್ ಕಮಲ್ ದೆಬ್ಬರ್ಮ ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ತಕ್ಷಣ ಆಸ್ಪತ್ರೆಯಲ್ಲಿ ಅಪಾರ ಜನಸ್ತೋಮ ಜಮಾಯಿಸಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿತ್ತು.