ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸುಪ್ರಸಿದ್ಧ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇಗುಲದ ಹುಂಡಿಯಲ್ಲಿ ಒಂದೇ ತಿಂಗಳಿನಲ್ಲಿ ಒಂದು ಕೋಟಿ ರೂಪಾಯಿ ಸಂಗ್ರಹವಾಗಿದೆ.
ಸ್ತ್ರೀ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳಾಮಣಿಗಳು ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ದೇವರ ದರುಶನ ಪಡೆದು ಬರುತ್ತಿದ್ದಾರೆ. ಸ್ತ್ರೀ ಶಕ್ತಿ ಸಂಘಗಳ ಮೂಲಕ ಬಸ್ ಹತ್ತಿ ದೇಗುಲಗಳಿಗೆ ಭೇಟಿ ನೀಡಿದ್ದು, ಹೆಚ್ಚಿನ ಭಕ್ತರು ಬಂದ ಕಾರಣ ಹುಂಡಿಯೂ ವೇಗವಾಗಿ ತುಂಬಿ ಹೋಗಿದೆ.
ಕೊಪ್ಪಳದ ಮುನಿರಾಬಾದ್‌ನ ಹುಲಿಗೆಮ್ಮ ದೇವಿಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿಯೂ ಸಾಕಷ್ಟು ಭಕ್ತರಿದ್ದು, ಒಂದೇ ತಿಂಗಳಿನಲ್ಲಿ ಒಂದು ಕೋಟಿ ರೂಪಾಯಿ ಹಣ, 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಸಂಗ್ರಹವಾಗಿದೆ.
ಶಕ್ತಿ ಯೋಜನೆಯಿಂದಾಗಿ ಸಾಕಷ್ಟು ಮಹಿಳಾ ಭಕ್ತರು ಆಗಮಿಸಿದ್ದು, ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.