ಹರಿ ಶಯನೀ ಏಕಾದಶಿ: ಉಡುಪಿಯ ಶ್ರೀಕೃಷ್ಣ‌ಮಠದಲ್ಲಿ ತಪ್ತ ಮುದ್ರಾಧಾರಣೆ

ಹೊಸದಿಗಂತ ವರದಿ ಉಡುಪಿ:

ಉಡುಪಿ ಶ್ರೀ ಕೃಷ್ಣಮಠದಲ್ಲಿ ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.

ಪರ್ಯಾಯ ಶ್ರೀಪಾದರು ಮುದ್ರಾಧಾರಣೆಯನ್ನು ಮಾಡಿಕೊಂಡು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರಿಗೆ ಪರ್ಯಾಯ ಶ್ರೀಪಾದರು ಮುದ್ರಾಧಾರಣೆಯನ್ನು ನಡೆಸಿದರು.


ನಂತರ ಆಗಮಿಸಿದ ಸಹಸ್ರಾರು ಭಕ್ತಾದಿಗಳಿಗೆ ಪರ್ಯಾಯ ಶ್ರೀ ಪಾದರು,ಕಾಣಿಯೂರು ಶ್ರೀಪಾದರು,ಅದಮಾರು ಕಿರಿಯ ಶ್ರೀಪಾದರು ತಪ್ತ ಮುದ್ರಾಧಾರಣೆ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!