ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ವಿರುದ್ಧ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ.
ರೇಣುಕಾಚಾರ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು.ಹೀಗಾಗಿ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
ರೇಣುಕಾಚಾರ್ಯ ಅವರಿಗೆ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡದಂತೆ ಹಲವು ಬಾರಿ ಸೂಚನೆ ನೀಡಲಾಗಿದ್ದರೂ, ಮತ್ತೆ ಪಕ್ಷ ವಿರೋಧಿ ಮಾತುಗಳನ್ನಾಡುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ವತಿಯಿಂದ ರೇಣುಕಾಚಾರ್ಯ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.
ನೋಟಿಸ್‌ನಲ್ಲಿ ಪಕ್ಷದ ಬಗ್ಗೆ ಮಾತನಾಡದಂತೆ ತಿಳಿ ಹೇಳಿದ್ದರೂ, ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದೀರಿ. ಇದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದೆಂದು ಕಾರಣಕೇಳಿ ನೋಟಿಸ್ ಜಾರಿ ಮಾಡಲಾಗುತ್ತಿದೆ. ಈ ನೋಟಿಸ್ ನಿಮ್ಮ ಕೈ ತಲುಪಿದ ಒಂದು ವಾರದೊಳಗೆ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ರಾಜ್ಯ ಶಿಸ್ತು ಸಮಿತಿಗೆ ನೀಡಬೇಕು.