ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಹಲವಾರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಈ ಹಿನ್ನೆಲೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬಾಂಬೆ ಹೈಕೋರ್ಟ್, ಬಾಂದ್ರಾ ಮೆಟ್ರೋಪಾಲಿಟನ್ ಕೋರ್ಟ್, ಅಂಧೇರಿ ಮೆಟ್ರೋಪಾಲಿಟನ್ ಕೋರ್ಟ್ ಮತ್ತು ಫೋರ್ಟ್ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂಬೈನ ಹಲವಾರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಕೂಡಲೇ ಮುಂಬೈ ಪೊಲೀಸರು ಬೆದರಿಕೆ ಇಮೇಲ್ ಕಳಿಸಿದ ಇಡಿಯ ಮಾಹಿತಿಯನ್ನು ಪತ್ತೆಹಚ್ಚುತ್ತಿದ್ದಾರೆ
ಬೆದರಿಕೆ ಬಂದ ಎಲ್ಲಾ ನ್ಯಾಯಾಲಯದ ಆವರಣದಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದ್ದು, ಈವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ, ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. ಇನ್ನೂ ಬಾಂಬೆ ಹೈಕೋರ್ಟ್ ಆವರಣದಲ್ಲಿ ಬಾಂಬ್ ಸ್ಕ್ವ್ಯಾಡ್ ಸೇರಿದಂತೆ ಶ್ವಾನ ದಳ ಶೋಧ ಕಾರ್ಯ ನಡೆಸಿವೆ.

