ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದಲೇ ಅನ್ನ ಭಾಗ್ಯ ಯೋಜನೆ ಅನ್ವಯ ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಹೇಳಿದೆ.
ಆದರೆ ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಹಾಕೋದು ಹೇಗೆ? ಬಿಪಿಎಲ್ ಕಾರ್ಡ್ಗಳಲ್ಲಿ ಬ್ಯಾಂಕ್ ಹಾಗೂ ಪ್ಯಾನ್ ವಿವರಗಳು ಇಲ್ಲ. ಹೀಗಾಗಿ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುವುದು ಹೇಗೆ ಎನ್ನುವ ಸಮಸ್ಯೆ ರಾಜ್ಯ ಸರ್ಕಾರಕ್ಕೆ ಎದುರಾಗಿದೆ.
ಪ್ರತಿ ತಿಂಗಳು ಖಾತೆದಾರರಿಗೆ 170 ರೂಪಾಯಿ ಜಮಾ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಜಮಾ ಮಾಡುವುದು ಹೇಗೆ ಎನ್ನುವ ಪ್ರಶ್ನೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿದೆ. ಸರ್ಕಾರದ ಆದೇಶಕ್ಕಾಗಿ ಇಲಾಖೆ ಕಾಯುತ್ತಿದ್ದು, ಏನಾಗುತ್ತದೆ ಕಾದುನೋಡಬೇಕಿದೆ.