ಕೇಂದ್ರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿ ವಜಾ: 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಟ್ವಿಟರ್ ಸಂಸ್ಥೆಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆಯೇ ಸಂಸ್ಥೆಗೆ 50 ಲಕ್ಷ ರೂ ದಂಡ ವಿಧಿಸಿದೆ.

ಈ ಕುರಿತು ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿದೆ.

ದಂಡದ ಮೊತ್ತವನ್ನು 45 ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ ದಿನಕ್ಕೆ ₹ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಫೆಬ್ರವರಿ 2021 ಮತ್ತು ಫೆಬ್ರವರಿ 2022 ರ ನಡುವೆ ಹಲವಾರು ಸೋಶಿಯಲ್ ಮೀಡಿಯಾ ಖಾತೆಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸಲು ಕೇಂದ್ರವು ಟ್ವಿಟರ್ ಗೆ ಕೇಳಿತ್ತು. ಈ ಪೈಕಿ 39 ಬ್ಲಾಕ್ ಆದೇಶಗಳನ್ನು ಟ್ವಿಟರ್ ಕಳೆದ ವರ್ಷ ಪ್ರಶ್ನಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!