ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ಆಟೋದಲ್ಲಿ ಪ್ರವಾಸಿಗರು ತೆರಳುತ್ತಿದ್ದು, ಇವರ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಮಕ್ಕಳು ಹಾಗೂ ಒಬ್ಬರು ಮಹಿಳೆ ಇದ್ದಾರೆ.
ಮೃತರು ಬಳ್ಳಾರಿಯ ಗೌತಮ್ ನಗರದವರಾಗಿದ್ದು, ಮನೆಯವರೆಲ್ಲ ಡ್ಯಾಮ್ ನೋಡಲು ಹೊರಟಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.