ಪ್ರಯಾಣಿಕರೇ ಗಮನಿಸಿ: ಜು.2ರಂದು ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟ್ರಾಫಿಕ್‌ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬೆಂಗಳೂರಿಗರು ಮೆಟ್ರೋ ಮೊರೆ ಹೋಗಿದ್ದಾರೆ. ಹಾಗಾಗಿ ಪ್ರಯಾಣಿಕರು ಈ ಸುದ್ದಿಯನ್ನು ಒಮ್ಮೆ ಗಮನಿಸಿ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ನಮ್ಮ ಮೆಟ್ರೋ ಸೇವೆಯಲ್ಲಿ ಎರಡು ಗಂಟೆಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೇಳಿದೆ.

ಮೆಟ್ರೋ ರೈಲು ನಿಗಮವು ದಿನಾಂಕ 02.07.2023 ರಂದು(ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಸಂಚಾರ ನಡೆಸಲಿವೆ.

ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕಾಗಿದ್ದು, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್​​ಸಿಎಲ್ ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!